ಶ್ರೀರಾಮುಲು, ಶೆಟ್ಟರ್, ನಿಖಿಲ್ ಕುಮಾರಸ್ವಾಮಿಗೆ ಬಿಗ್ ಶಾಕ್

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹಿನ್ನಡೆತಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸುಮಾರು 14 ಸಾವಿರ ಮತಗಳ ಅಂತರದಿಂದ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ.

ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 12,000 ಮತಗಳಿಂದ ಹಿನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 12,627 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ 10,000 ಮತಗಳ ಅಂತರದಿಂದ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಮುನ್ನಡೆ ಗಳಿಸಿದ್ದು ಜಗದೀಶ್ ಶೆಟ್ಟರ್ ಅವರಿಗೆ ಸತತ ಹಿನ್ನಡೆಯಾಗಿದೆ.

ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪುಟ್ಟರಂಗಶೆಟ್ಟಿ 13072 ಮತಗಳ ಅಂತರದಿಂದ ಬಿಜೆಪಿಯ ವಿ. ಸೋಮಣ್ಣ ವಿರುದ್ಧ ಮುನ್ನಡೆ ಗಳಿಸಿದ್ದಾರೆ.

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿಯ ಕುಮಾರ್ ಬಂಗಾರಪ್ಪಗೆ ಹಿನ್ನಡೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read