
ನವದೆಹಲಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ 125 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ 71 ಹಾಲಿ ಶಾಸಕರಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ. 125 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಿ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಕೇಂದ್ರೀಯ ಚುನಾವಣಾ ಸಮಿತಿ ಸೂಚಿಸಿದೆ. ಆದರೆ, ರಾಜ್ಯ ಕಾಂಗ್ರೆಸ್ ಘಟಕದ ಸಲಹೆ ಮೇರೆಗೆ ಯುಗಾದಿ ಹಬ್ಬದ ಬಳಿಕ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.
ರಾಹುಲ್ ಗಾಂಧಿ ಬೆಳಗಾವಿ ಭೇಟಿ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಸ್ಕ್ರೀನಿಂಗ್ ಕಮಿಟಿ ಮತ್ತು ಸೆಂಟ್ರಲ್ ಎಲೆಕ್ಷನ್ ಕಮಿಟಿ ಮತ್ತೊಮ್ಮೆ ಸಭೆ ಸೇರಲಿದೆ ಎಂದು ಹೇಳಲಾಗಿದೆ.