ನವದೆಹಲಿ: ದೇಶದ ಗಮನ ಸೆಳೆದಿದ್ದ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಿದ್ದು, ಕಾಂಗ್ರೆಸ್ ಪಕ್ಷ 51 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ ದಾಟಿದೆ. ಸಮೀಕ್ಷೆಗಳಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಮಧ್ಯಾಹ್ನದೊಳಗೆ ಯಾವ ಪಕ್ಷ ಎಷ್ಟು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎನ್ನುವುದರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆಯಾಗಿದೆ ಎನ್ನಲಾಗಿದೆ.