ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಗಳಿಸಿದೆ.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಿದ್ದು, ಕಾಂಗ್ರೆಸ್ ಮೈತ್ರಿಕೂಟ 31 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 28, ಇತರರು 7 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಹೇಳಿದ್ದವು. ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಇಂದು ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಬುದ್ಗಾಂ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.