ಚಂಡಿಗಢ: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಡೆಡ್ ಲೈನ್ ನೀಡಿದ್ದಾರೆ.
ಅಮೃತಸರದಲ್ಲಿ ವರ್ಚುಯಲ್ ಪ್ರಚಾರ ನಡೆಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಸಿಧು ಡೆಡ್ ಲೈನ್ ಹಾಕಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡಬೇಕೆಂದು ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಕೂಡ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಶೀಘ್ರವೇ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ನವಜೋತ್ ಸಿಂಗ್ ಸಿಧು ಮತ್ತು ಚರಣ್ ಜಿತ್ ಸಿಂಗ್ ಚನ್ನಿ ಒತ್ತಾಯದ ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಿರ್ಧರಿಸುತ್ತಾರೆ. ನಾವು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇವೆ. ಪಕ್ಷದ ಕಾರ್ಯಕರ್ತರೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಲ್ಲಿ ಪಂಜಾಬ್ ಅನ್ನು ಯಾರು ಮುನ್ನಡೆಸುತ್ತಾರೆ(ಮುಖ್ಯಮಂತ್ರಿ) ಎಂಬುದನ್ನು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸುತ್ತಾರೆ. ಯಾರೇ ಸಿಎಂ ಆದರೂ ಕಾಂರ್ಯಕರ್ತರ ನಿರ್ಧಾರವನ್ನು ಇನ್ನೊಬ್ಬರು ಬೆಂಬಲಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಹುಲ್ ಹೇಳಿದ್ದಾರೆ