
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಪ್ರೊಫೆಸರ್ ಹೆಚ್. ನಾಗರಾಜ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದ ಹಿನ್ನಲೆಯಲ್ಲಿ ಪ್ರೊ. ನಾಗರಾಜ್ ಅವರನ್ನು ಅಮಾನತುಗೊಳಿಸಿ ಮೈಸೂರು ವಿವಿ ಆದೇಶ ಹೊರಡಿಸಿದೆ.
ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ಭೂಗೋಳ ಶಾಸ್ತ್ರ ಪ್ರಾಧ್ಯಾಪಕ ನಾಗರಾಜ್ ಪ್ರಶ್ನೆಪತ್ರಿಕೆ ಸಿದ್ದಪಡಿಸಿದ್ದು, ಅದನ್ನು ಅತಿಥಿ ಉಪನ್ಯಾಸಕಿ ಸೌಮ್ಯಾ ಅವರಿಗೆ ನೀಡಿದ್ದರು. ಮಾ. 14 ರಂದು ಭೂಗೋಳ ಶಾಸ್ತ್ರ ವಿಷಯದ ಪರೀಕ್ಷೆ ನಡೆದಿದ್ದು, ಪ್ರಶ್ನೆ ಪತ್ರಿಕೆಯಲ್ಲಿನ 18 ಪ್ರಶ್ನೆಗಳು ಪರೀಕ್ಷೆ ನಡೆಯುವ ಮೊದಲೇ ಸೋರಿಕೆಯಾಗಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಅತಿಥಿ ಉಪನ್ಯಾಸಕಿ ಸೌಮ್ಯಾ ಅವರನ್ನು ಬಂಧಿಸಿದ್ದರು.
ಸೌಮ್ಯಾ ಅವರ ಪಿ.ಹೆಚ್.ಡಿ. ಮಾರ್ಗದರ್ಶಕರಾಗಿದ್ದ ಹೆಚ್. ನಾಗರಾಜ್ ಪ್ರಶ್ನೆಗಳನ್ನು ಸೋರಿಕೆ ಮಾಡಿದ್ದ ಬಗ್ಗೆ ವಿಚಾರಣೆ ನಡೆಸಿ ಅವರನ್ನು ಬಂಧಿಸಲಾಗಿತ್ತು.