ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ನೇಮಕಾತಿ ಅರ್ಹತೆ ಸಂಬಂಧ ಪರಿಶೀಲನೆ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ-(1)ರ ಸರ್ಕಾರಿ ಅಧಿಸೂಚನೆಯನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ನೇಮಕಾತಿ ಅರ್ಹತೆ ಸಂಬಂಧ ಉಲ್ಲೇಖ-(2) ರ ಸರ್ಕಾರದ ಪತ್ರದಲ್ಲಿ ನೀಡಿರುವ ನಿರ್ದೇಶನದ ಮೇರೆಗೆ ಪರಿಶೀಲಿಸಲಾಗುತ್ತಿದೆ. ಸಾಮಾನ್ಯ ನೇಮಕಾತಿ ನಿಯಮಗಳು 1977 ರ ನಿಯಮ -10ರಲ್ಲಿ “Every candidate selected for direct recruitment shall furnish to the appointing authority certificates given not more than six months prior to the date of his selection, by two respectable persons unconnected with his college or university, and not related to him testifying to his character, in addition to the certificate or certificates which may be required to be furnished from the educational institution last attended by the candidate” ಎಂಬುದಾಗಿ ತಿಳಿಸಲಾಗಿದ್ದು, ಅದರಂತೆ ಈ ಪತ್ರದೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿ ಹೆಸರಿಸಲಾಗಿರುವ ಅಭ್ಯರ್ಥಿಗಳು ತಮ್ಮ ನಡತೆ ಪ್ರಮಾಣ ಪತ್ರವನ್ನು ಪಡೆದು ಈ ಕಛೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.