ರೊಮೇನಿಯಾದ ಕೋವಿಡ್-19 ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರೊಮೇನಿಯಾ ಉತ್ತರ ನಗರ ಪಿಯಾಟ್ರಾ ನೀಮ್ಸ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಕೋವಿಡ್ ಸೋಂಕಿತರು ಇದ್ದ ತೀವ್ರ ನಿಗಾ ಘಟಕದ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಸ್ಥಳಿದ್ದವರನ್ನು ರಕ್ಷಿಸಲಾಗಿದ್ದು, ಬೆಂಕಿ ನಂದಿಸಲಾಗಿದೆ ಎಂದು ತುರ್ತು ಪರಿಸ್ಥಿತಿ ತನಿಖಾಧಿಕಾರಿ ವಕ್ತಾರ ಐರಿನಾ ಪೋಪಾ ಹೇಳಿದ್ದಾರೆ.
ರೊಮೇನಿಯಾದ ಆರೋಗ್ಯ ಮಂತ್ರಿ ನೆಲ್ಲು ಟಾಟಾರು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಅವಘಡ ಉಂಟಾಗಿದೆ. ರಕ್ಷಣಾ ಕಾರ್ಯಾಚರಣೆ ಬಳಿಕ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.