ಗಾಜಾ: ದಕ್ಷಿಣ ಮತ್ತು ಮಧ್ಯ ಪ್ರದೇಶಗಳಲ್ಲಿ ಇಸ್ರೇಲಿ ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 57 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕದನ ವಿರಾಮ ಒಪ್ಪಂದಕ್ಕೆ ಬರಲು ಅರಬ್ ಮಧ್ಯವರ್ತಿಗಳು ಮತ್ತು ಯುನೈಟೆಡ್ ಸ್ಟೇಟ್ಸ್‌ನ ಪ್ರಯತ್ನಗಳನ್ನು ಹಳಿತಪ್ಪಿಸಲು ಗಾಜಾದಲ್ಲಿ ಇಸ್ರೇಲ್ ದಾಳಿಗಳನ್ನು ಹೆಚ್ಚಿಸುತ್ತಿದೆ ಎಂದು ಪ್ಯಾಲೆಸ್ತೀನ್ ಗುಂಪು ಹಮಾಸ್ ಆರೋಪಿಸಿದೆ. ಹಮಾಸ್ ಹೋರಾಟಗಾರರನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.
ಮೇ ತಿಂಗಳಿನಿಂದ ಇಸ್ರೇಲಿ ಪಡೆಗಳು ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಗಡಿ ನಗರವಾದ ರಫಾದಲ್ಲಿ, ಮನೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಐವರು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಖಾನ್ ಯೂನಿಸ್‌ನಲ್ಲಿ ಒಬ್ಬ ವ್ಯಕ್ತಿ, ಅವನ ಹೆಂಡತಿ ಮತ್ತು ಇಬ್ಬರು ಮಕ್ಕಳು ಕೊಲ್ಲಲ್ಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ, ದಕ್ಷಿಣ ಗಾಜಾದ ಖಾನ್ ಯೂನಿಸ್‌ನಲ್ಲಿ ಕಾರ್ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.