![](https://kannadadunia.com/wp-content/uploads/2021/11/Andhra-Accident.jpg)
ಚಲಿಸುತ್ತಿದ್ದ ಟ್ರಕ್ಗೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆಯು ಹೈದರಾಬಾದ್ – ಬೆಂಗಳೂರು ಹೆದ್ದಾರಿಯ ಅನಂತಪುರದ ಪಮಿದಿ ಮಂಡಲ್ನಲ್ಲಿ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ.
ಆಟೋದಲ್ಲಿ ಬಹುತೇಕ ಮಹಿಳೆಯರು ಸೇರಿದಂತೆ ಪುರುಷರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಅನಂಪುರಂನ ಕೊಪ್ಪಲ್ಲಕೊಂಡ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ. ಗಾಯಗೊಂಡವರಲ್ಲಿ ಅನೇಕರು ತುರ್ತು ನಿಗಾ ಘಟಕದಲ್ಲಿ ಇರುವುದರಿಂದ ಸಾವನ್ನಪ್ಪಿದ್ದವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.