alex Certify ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಜವರಾಯನ ಅಟ್ಟಹಾಸ; ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಜವರಾಯನ ಅಟ್ಟಹಾಸ; ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಟ್ರಕ್​​ಗೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆಯು ಹೈದರಾಬಾದ್​ – ಬೆಂಗಳೂರು ಹೆದ್ದಾರಿಯ ಅನಂತಪುರದ ಪಮಿದಿ ಮಂಡಲ್​​ನಲ್ಲಿ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ.

ಆಟೋದಲ್ಲಿ ಬಹುತೇಕ ಮಹಿಳೆಯರು ಸೇರಿದಂತೆ ಪುರುಷರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಬಂದ ಟ್ರಕ್​ ಡಿಕ್ಕಿ ಹೊಡೆದ ರಭಸಕ್ಕೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಅನಂಪುರಂನ ಕೊಪ್ಪಲ್ಲಕೊಂಡ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಶಿಫ್ಟ್​ ಮಾಡಲಾಗಿದೆ. ಗಾಯಗೊಂಡವರಲ್ಲಿ ಅನೇಕರು ತುರ್ತು ನಿಗಾ ಘಟಕದಲ್ಲಿ ಇರುವುದರಿಂದ ಸಾವನ್ನಪ್ಪಿದ್ದವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...