ಬೆಂಗಳೂರು : ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
15 ದಿನ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ. ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವು ಶೂನ್ಯ ಇದೆ. ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ದೇವರ ಮೊರೆ ಹೋಗೋಣ, ಮಳೆ ಬರಲಿ ಎಂದು ಪ್ರಾರ್ಥಿಸೋಣ ಎಂದರು.
ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ.ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು, ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುತ್ತಿದೆ. ಅಕ್ಟೋಬರ್ ಅಂತ್ಯದವರೆಗೆ ನೀರು ಹರಿಸಲು CWRC ಆದೇಶಿಸಿತ್ತು. ಇದೀಗ ಮತ್ತೆ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ.