
ಹಾಸನ: ಬ್ಯಾಂಕ್ ದರೋಡೆ, ಮನೆಗಳ್ಳತನ, ಸುಲಿಗೆ ಬಳಿಕ ಇದೀಗ ಕಳ್ಳರು ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಕಳ್ಳರು ಎಟಿಎಂನ್ನೇ ಕದ್ದು ಪರಾರಿಯಾಗುತ್ತಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿದ್ದ ಎಟಿಎಂನ್ನೇ ಕದ್ದು ಎಸ್ಕೇಪ್ ಆಗಿದ್ದಾರೆ. ಘಟ್ನಾ ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.