alex Certify ದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ 25ಕ್ಕೂ ಹೆಚ್ಚು ಜನರ ವಿರುದ್ಧ ಕೇಸು ದಾಖಲಿಸಲಾಗಿದೆ.

ಗುಂಪೊಂದು ಅನೈತಿಕ ಪೊಲೀಸ್ ಗಿರಿ ನಡೆಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದೆ ಎಂದು ಆರೋಪಿಸಿ ಉದಯಕುಮಾರ್ ದೂರು ನೀಡಿದ್ದಾರೆ. ಕೋಮನೆ ಗ್ರಾಮದ ಶೇಷಪ್ಪ ಗೌಡ ಅವರಿಂದ ಎಂಟು ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುವಾಗ ಕುರುವಳ್ಳಿಯಲ್ಲಿ ಗುಂಪೊಂದು ಅವಾಚ್ಯ ಪದಗಳಿಂದ ಬೈದು ಮಾರಣಾಂತಿಕವಾಗಿ ಹಲ್ಲೆ ಮಾಡಿದೆ.

ಉದಯಕುಮಾರ್ ಜೊತೆಗಿದ್ದ ರಾಹಿದ್ ಮೇಲೆಯೂ ಹಲ್ಲೆ ಮಾಡಲಾಗಿದ್ದು, ಅವರಿಗೆ ತೀವ್ರ ಪೆಟ್ಟಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದೆವು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...