ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮದಲ್ಲಿ ಕಾಡಾನೆ ದಾಳಿ ಮಾಡಿದ್ದು, ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.