ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ಈ ವೇಳೆ ಸೀಟಿನ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.
ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿ ದೇವರ ದರ್ಶನಕ್ಕೆ ತೆರಳಿದ್ದರು. ವಾಪಸ್ ಬರುವಾಗ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.