ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಅಪ್ರಾಪ್ತ ಪುಂಡರು ಅಟ್ಟಹಾಸ ಮೆರೆದಿದ್ದು, ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ದುಷ್ಕ್ರತ್ಯ ಮೆರೆದಿದ್ದಾರೆ.
ಹೆಲ್ಮೆಟ್ ಇಲ್ಲದೇ ಸ್ಕೂಟಿ ಚಲಾಯಿಸಿಕೊಂಡು ಬಂದ ಮೂವರು ಅಪ್ರಾಪ್ತ ಬಾಲಕರು ರಸ್ತೆಯಲ್ಲಿ ಬೇಕಾಬಿಟ್ಟಿ ಬೈಕ್ ಚಲಾಯಿಸಿಕೊಂಡು ಬಂದಿದ್ದಾರೆ. ತ್ರಿಬಲ್ ರೈಡಿಂಗ್ ಮಾಡುತ್ತಾ ಹೆಲ್ಮೆಟ್ ಇಲ್ಲದೇ ಬೇಕಾಬಿಟ್ಟಿ ವಾಹನ ಚಲಾಯಿಸಿದ್ದಾರೆ.
ಕಮ್ಮನಹಳ್ಳಿಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಪ್ರಾಪ್ತರು ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ 2 ಕಾರು ಜಖಂ ಆಗಿದೆ. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.