ಬೆಳಗಾವಿ: ಹಾಡಹಗಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲು ಯತ್ನ ನಡೆದಿದೆ. ಸಾರ್ವಜನಿಕರ ಎದುರಲ್ಲೇ ಕುಡುಗೋಲಿನಿಂದ ವ್ಯಕ್ತಿಯನ್ನು ಕೊಚ್ಚಿ ದುಷ್ಕರ್ಮಿ ಅಟ್ಟಹಾಸ ಮೆರೆದ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ನಡೆದಿದೆ.
ಮಕ್ತುಮ್ ತಟಗಾರ ಅವರ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಲಾಗಿದೆ. ಆರೋಪಿ ಮುತ್ತು ಎಂಬಾತ 6ಕ್ಕೂ ಹೆಚ್ಚು ಬಾರಿ ಕುಡುಗೊಲಿನಿಂದ ಕೊಚ್ಚಿ ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಮಕ್ತುಮ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಜನ ಬೆಚ್ಚಿ ಬಿದ್ದಿದ್ದಾರೆ.