ಶಿವಮೊಗ್ಗ: ಯುವತಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಸುಹೇಲ್ ಮತ್ತು ಸಾಕಿಬ್ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಯುವತಿ ಕಂಪ್ಯೂಟರ್ ತರಬೇತಿಗೆ ಹೋಗುತ್ತಿದ್ದಾಗ ಸುಹೇಲ್ ಪರಿಚಯವಾಗಿದ್ದು, ಪ್ರೀತಿ ಮಾಡುವಂತೆ ಬಲವಂತ ಮಾಡಿದ್ದ. ಆದರೆ, ಇದನ್ನು ಒಪ್ಪದ ಯುವತಿ ಆತನ ಪ್ರೀತಿಯನ್ನು ತಿರಸ್ಕರಿಸಿದ್ದಳು. ಶನಿವಾರ ಕಾಲೇಜಿನಲ್ಲಿ ಇದ್ದೇನೆ ಬಾ ಎಂದು ಜೀಪ್ ನಲ್ಲಿ ಕರೆದುಕೊಂಡು ಹೋದ ಸುಹೇಲ್ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಯುವತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.