
ಬೆಂಗಳೂರು: ದೀಪಾವಳಿ ಪಾರ್ಟಿ ಸಂದರ್ಭದಲ್ಲಿ ಅಪ್ರಾಪ್ತನೊಬ್ಬ ಆಘಾತಕಾರಿ ಕೃತ್ಯವೆಸಗಿದ್ದಾನೆ. ಪಾರ್ಟಿಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಾರ್ಟ್ ಮೆಂಟ್ ವೊಂದರಲ್ಲಿ ದೀಪಾವಳಿ ಅಂಗವಾಗಿ ಯುವಕರು, ಯುವತಿಯರು ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಪ್ರಾಪ್ತ, ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿತ ಬಾಲಕನನ್ನು ವಶಕ್ಕೆ ಪಡೆದು ರಿಮ್ಯಾಂಡ್ ಹೋಂಗೆ ಕಳುಹಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.