
ದೊಡ್ಡಬಳ್ಳಾಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 20 ರಂದು ಮಧ್ಯಾಹ್ನ ಮಹಿಳೆ ಹೊಲದಲ್ಲಿ ಕೆಲಸ ಮಾಡುವಾಗ ನರಸಪ್ಪ ಎಂಬತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತೀವ್ರ ವಿರೋಧ ವ್ಯಕ್ತಪಡಿಸಿದಾಗ ಕಲ್ಲು ಹಾಗೂ ದೊಣ್ಣೆಯಿಂದ ಮಹಿಳೆಯ ಖಾಸಗಿ ಭಾಗಗಳಿಗೆ ತೀವ್ರವಾಗಿ ಹೊಡೆದು ಹಲ್ಲೆ ಮಾಡಿದ್ದಾನೆ. ಸ್ಥಳಕ್ಕೆ ಬಂದ ಆರೋಪಿಯ ಪತ್ನಿ ಕೂಡ ವಿಷಯ ತಿಳಿದೆ ತಿಳಿಯದೇ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾಳೆ. ನಂತರ ಆರೋಪಿಗಳಿಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.
ಅಪರಿಚಿತ ಬೈಕ್ ಸವಾರರ ನೆರವಿನೊಂದಿಗೆ ಸಾಸಲು ಗ್ರಾಮಕ್ಕೆ ಆಗಮಿಸಿದ ಮಹಿಳೆ ನಂತರ ಆಟೋದಲ್ಲಿ ತೆರಳಿ ದೊಡ್ಡಬಳ್ಳಾಪುರ ಸಾರ್ವಜನಿಕದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.