ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ.
ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.