
ದಾವಣಗೆರೆ: ಕಾಮುಕನೊಬ್ಬ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೂಗಾಡಿದ ಮಹಿಳೆಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಗುರುವಾರ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ. ವಿವಾಹಿತೆ ಮನೆಯಲ್ಲಿದ್ದ ವೇಳೆ ಮನೆಯೊಳಗೆ ನುಗ್ಗಿದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಕೂಗಾಡಿದಾಗ ನಿಂದಿಸಿ ಬೆನ್ನು, ಕುತ್ತಿಗೆ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಕೂಗಾಟ ಕೇಳಿದ ನೆರೆಹೊರೆಯವರು ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಮಹಿಳೆ ಬಿದ್ದಿರುವುದು ಕಂಡುಬಂದಿದೆ. ಅವರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.