ಧಾರವಾಡ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.
ಗ್ರಾಮದಲ್ಲಿ ಶಿವಾಜಿ ಜಯಂತಿ ಹಾಗೂ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮ ಮುಗಿದನಂತರ ಬಾಲಕಿ ಮನೆಗೆ ತೆರಳುವಾಗ ಘಟನೆ ನಡೆದಿದೆ. ಮೂವರು ಯುವಕರು ಬಾಲಕಿಯನ್ನು ಮನೆಯೊಂದಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಬಾಲಕಿ ಕೂಗಾಡಿದ್ದು, ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿದ್ದಾರೆ.
ಬಾಲಕಿಯ ಪೋಷಕರು ಧಾರವಾಡ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಮೂವರು ಯುವಕರನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.