ಗದಗ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅತ್ಯಾಚಾರಕ್ಕೆ ಯತ್ನಿಸಿದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಒಳಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಕೂಗಾಟ ಕೇಳಿ ನೆರಹೊರೆ ನಿವಾಸಿಗಳು ಸಹಾಯಕ್ಕೆ ಬಂದಿದ್ದಾರೆ. ಸ್ಥಳೀಯರು ಬಾಲಕಿ ಮನೆಗೆ ಬರುತ್ತಿದ್ದಂತೆ ಕಾಮುಕ ಪರಾರಿಯಾಗಿದ್ದು, ಬಾಲಕಿಯ ಪೋಷಕರು ಮುಂಡರಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.