alex Certify ತಾಯತ ಕಟ್ಟುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಪೂಜಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯತ ಕಟ್ಟುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಪೂಜಾರಿ ಅರೆಸ್ಟ್

ರಾಯಚೂರು: ದೇವಸ್ಥಾನದ ಪೂಜಾರಿ ವಿರುದ್ಧ ಅತ್ಯಾಚಾರ ಯತ್ನ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

8 ವರ್ಷದ ಬಾಲಕಿ ಮೇಲೆ ಪೂಜಾರಿ ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಎರಡು ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಸವೇಶ್ವರ ದೇವಸ್ಥಾನದ ಪೂಜಾರಿಯನ್ನು ಬಂಧಿಸಲಾಗಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಬಾಲಕಿ ತಾಯಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು.  ತಾಯತ ಕಟ್ಟುವ ನೆಪದಲ್ಲಿ ಪೂಜಾರಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...