alex Certify ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಯುವಕ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಯುವಕ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಶಿವಮೊಗ್ಗ: ಪ್ರೀತಿಸಿದ್ದ ಯುವಕ ನಂಬಿಸಿ ಮೋಸ ಮಾಡಿದ್ದರಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.

27 ವರ್ಷದ ಯುವತಿ, 30 ವರ್ಷದ ಯುವಕ 6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಯುವತಿ ಜತೆ ದೈಹಿಕ ಸಂಬಂಧ ಬೆಳೆಸಿದ್ದು, ಈಗ ಜಾತಿಯ ಕಾರಣ ನೀಡಿ ಮದುವೆಯಾಗಲು ನಿರಾಕರಿಸಿದ್ದಾನೆ.

ಇದರಿಂದ ಮನನೊಂದ ಯುವತಿ ವಂಚಿಸಿದ ಯುವಕನ ವಿರುದ್ಧ ವಿಡಿಯೋ ಮಾಡಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆ ಮತ್ತು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಂಚಿಸಿದ ಯುವಕ, ಆತನ ಭಾವ ಸೇರಿ ಮೂವರ ವಿರುದ್ಧ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...