
ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಫಿನಾಯಿಲ್ ಕುಡಿದು ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆಯಲ್ಲಿ ನಡೆದಿದೆ.
ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಸುಲ್ತಾನ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಶೌಚಾಲಯಕ್ಕೆ ಹೋಗಬೇಕು ಎಂದು ಹೇಳಿ ಹೋಗಿದ್ದ ಸುಲ್ತಾನ್ ಶೌಚಾಲಯಕ್ಕೆ ಹೋಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆರೋಪಿ ಸುಲ್ತಾನ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸುಲ್ತಾನ್ ಗೆ ಚಿಕಿತ್ಸೆ ಕೊಡಿಸಲಾಗಿದೆ.