
ಶಿವಮೊಗ್ಗ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಹೊರವಲಯದ ಚೆನ್ನಮುಂಬಾಪುರದಲ್ಲಿ ನಡೆದಿದೆ.
35 ವರ್ಷದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದವರು. ಅವರು ವಿಷ ಸೇವನೆಗೆ ಮೊದಲು ಮಾಜಿ ಶಾಸಕರು ಮತ್ತು ಅವರ ಪತ್ನಿ ಸೇರಿದಂತೆ ಹಲವರ ಹೆಸರುಗಳನ್ನು ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪದೇಪದೇ ಮನೆಗೆ ನುಗ್ಗಿ ಗಲಾಟೆ ಮಾಡುತ್ತಿದ್ದರಿಂದ ಮನನೊಂದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಮಹಾಲಕ್ಷ್ಮಿ ಮತ್ತು ಮಕ್ಕಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.