alex Certify ಪಡಿತರ ಚೀಟಿದಾರರ ಗಮನಕ್ಕೆ : `E-KYC’ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರ ಗಮನಕ್ಕೆ : `E-KYC’ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮುಖ್ಯದ ಮಾಹಿತಿ ನೀಡಿದ್ದು, ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ತಿಳಿಸಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ನೀವು ಬ್ಯಾಂಕ್ ಖಾತೆಗೆ ಆಧಾರ್ ಕೂಡ ಲಿಂಕ್ ಮಾಡಿಸಿಕೊಳ್ಳಬಹುದು. ಇದಕ್ಕೆ ಬೇಕಾಗುವ ದಾಖಲೆಗಳು.

1) ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
2)ಕುಟುಂಬದ ಸದಸ್ಯರ ಭಾವಚಿತ್ರ
3)ಕುಟುಂಬದ ಒಬ್ಬ ಸದಸ್ಯರ ಮೊಬೈಲ್ ಸಂಖ್ಯೆ ಮತ್ತು ಬಯೋಮೆಟ್ರಿಕ್
4)ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದಾದರೆ ಪಾಸ್ ಬುಕ್ ವಿವರ ಬೇಕಾಗುತ್ತದೆ.

ಆನ್ಲೈನ್ ಕೆವೈಸಿ ನವೀಕರಣ ಪ್ರಕ್ರಿಯೆ
ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
– ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
– ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
– ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.

KYC ಅನ್ನು ನವೀಕರಿಸದಿದ್ದರೆ ಏನು ಮಾಡಬೇಕು?

ಗ್ರಾಹಕರು ಕೆವೈಸಿ ವಿವರಗಳನ್ನು ನವೀಕರಿಸದಿದ್ದರೆ, ಬ್ಯಾಂಕ್ ಅವರ ವಹಿವಾಟಿನ ಮೇಲೆ ನಿರ್ಬಂಧಗಳನ್ನು ವಿಧಿಸಬಹುದು. ಅಥವಾ ಬ್ಯಾಂಕ್ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಬಹುದು. ಕೆಲವು ಸಂದರ್ಭಗಳಲ್ಲಿ ಖಾತೆಯನ್ನು ಮುಚ್ಚುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ, ಕೆಲವು ಹಣಕಾಸು ಮತ್ತು ಹಣಕಾಸುಯೇತರ ಚಟುವಟಿಕೆಗಳಿಗೆ ಬ್ಯಾಂಕ್ ಖಾತೆಯನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಬ್ಯಾಂಕ್ ಸಂಬಂಧಪಟ್ಟ ಗ್ರಾಹಕರಿಗೆ ಮುಂಚಿತವಾಗಿ ತಿಳಿಸುತ್ತದೆ.

ಪಡಿತರದಾರರು ತಪ್ಪದೇ ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ನಿಮಗೆ ರೇಷನ್ ಸಿಗಲ್ಲ. ಅನೇಕರು ಆಧಾರ್ ಕಾರ್ಡ್ ಅನ್ನು ರೇಷನ್ ಕಾರ್ಡ್ ಗೆ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿಲ್ಲ, ದಯವಿಟ್ಟು ಈ ಕೆಲಸ ಮಾಡಿಕೊಳ್ಳಿ. ಹಾಗೂ ಕುಟುಂಬ ಸದಸ್ಯರ e-kyc ಅಪ್ಡೇಟ್ ಆಗದಿರುವುದು ಅಥವಾ ನೀಡಿರುವ ಆಧಾರ್ ಕಾರ್ಡ್ ಮಾಹಿತಿ ತಪ್ಪಾಗಿರುವುದು , ಬ್ಯಾಂಕ್ ಅಕೌಂಟ್ ಮಾಹಿತಿ ನೀಡಿರುವುದು ಈ ಎಲ್ಲಾ ಕಾರಣದಿಂದ ಹಲವರು ಅನ್ನಭಾಗ್ಯ ಯೋಜನೆ ಹಣದಿಂದ ವಂಚಿತರಾಗಿದ್ದಾರೆ. ಆದ್ದರಿಂದ ತಪ್ಪದೇ ನೀವು ಈ ಕೆಲಸ ಮಾಡಬೇಕು.
ಆಗಸ್ಟ್ 31 ರ ಒಳಗೆ ಇ-ಕೆವೈಸಿ ಮಾಡದೇ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಸೌಲಭ್ಯ ನೀಡದಿರಲು ಆಹಾರ ಇಲಾಖೆ ನಿರ್ಧರಿಸಿದೆ. ಹೀಗಾಗಿ ಇ ಕೆವೈಸಿ ಮಾಡಲು ಬಾಕಿ ಇರುವವರಿಗೆ ಆ. 31ರ ಕೊನೆಯ ಗಡುವು ನೀಡಲಾಗಿದೆ. ಒಂದು ವೇಳೆ ಮಾಡಿಸದಿದ್ದಲ್ಲಿ ಅಂತಹ ಸದಸ್ಯಗಳನ್ನು ಪಡಿತರ ಚೀಟಿಯಿಂದ ಅಮಾನತುಗೊಳಿಸುವ ಜತೆಗೆ ಫಲಾನುಭವಿಗಳಿಗೆ ಆಹಾರಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...