alex Certify ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 2024 ರ ಜನವರಿ, 10 ಕೊನೆಯ ದಿನವಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:1902 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೊಡಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...