ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಆರಂಭಿಸಿದೆ.
ಉಚಿತ ಸಹಾಯವಾಣಿ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಿದೆ. ನಿಮ್ಮ ಮನೆಯ ಆಸುಪಾಸಿನಲ್ಲಿ ಮರಗಳು ಬೀಳುವ ಸ್ಥಿತಿಯಲ್ಲಿದ್ದರೆ ಅಥವಾ ಅಪಾಯವನ್ನು ತಂದೊಡ್ಡುವ ಸ್ಥಿತಿಯಲ್ಲಿದ್ದರೆ ಕೂಡಲೇ ತಮ್ಮ ವ್ಯಾಪ್ತಿಯ ಕಂಟ್ರೋಲ್ ರೂಂ ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.