ಬೆಂಗಳೂರು : ಬಿಬಿಎಂಪಿ ರಾಜರಾಜೇಶ್ವರಿ ವಲಯದಲ್ಲಿನ ನೀರಿನ ಅಭಾವದ ಸಮಸ್ಯೆಯನ್ನು ನಿರ್ವಹಿಸಲು ಈ ವಲಯದ 14 ವಾರ್ಡ್ಗಳಿಗೆ 14 ನೋಡೆಲ್ ಅಧಿಕಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿಯೋಜಿಸಿದ್ದಾರೆ.
ಬೆಂಗಳೂರು ಜಲಮಂಡಳಿ ಮತ್ತು ಬಿಬಿಎಂಪಿಯ ಅಧಿಕಾರಿಗಳು ತುರ್ತು ಕ್ರಮಗಳನ್ನು ಕೈಗೊಳ್ಳಲು, ಸಮಸ್ಯೆ ಬಗೆಹರಿಸಲು ಈ ನಿಯೋಜನೆ ಮಾಡಲಾಗಿದೆ. ನೋಡೆಲ್ ಅಧಿಕಾರಿಗಳೊಂದಿಗೆ ಜಲಮಂಡಳಿಯ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.
ಅದೇ ರೀತಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯ ಖಾಸಗಿ ಟ್ಯಾಂಕರ್ಗಳಿಗೆ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.