alex Certify ‘ಯುವನಿಧಿ’ ಫಲಾನುಭವಿಗಳ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ |Yuvanidhi Scheme | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯುವನಿಧಿ’ ಫಲಾನುಭವಿಗಳ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ |Yuvanidhi Scheme

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ.

ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ ನಂ-22, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗೆ ಹಾಜರಾಗಬೇಕು.

ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25 ನೇ ತಾರೀಖಿನ ಒಳಗಾಗಿ ‘ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡಬೇಕಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ದೂ. 8296020826 / 8123312319 ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...