ಬೆಂಗಳೂರು : ಜಲಮಂಡಳಿ ಕಾಮಗಾರಿ ನಡೆಯುವ ಹಿನ್ನೆಲೆ ಸೆ.23 ರಂದು ಬೆಂಗಳೂರಿನ ವಿವಿಧಡೆ ಕುಡಿಯುವ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಸೆಪ್ಟಂಬರ್ 23ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 2 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ, ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮನವಿ ಮಾಡಿದೆ.