ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.
ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏಕಕಾಲಕ್ಕೆ 6 ಸಾವಿರ ರೂ. ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ನೆರವು ಪಡೆದು ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಆದರೂ ಇನ್ನೂ ಕೂಡ ಹಲವು ಮಹಿಳೆಯ ಖಾತೆಗೆ ಹಣ ಬಂದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಡಿ.27 ರಿಂದ ಗ್ರಾಮ ಮಟ್ಟದ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಯೋಚಿಸಿದ್ದು, ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ.
ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ. ಮಹಿಳೆಯರು ತಮ್ಮ ತಮ್ಮ ಗ್ರಾಮದಲ್ಲಿ ನಡೆಯಲಿರುವ ಕ್ಯಾಂಪ್ ಗೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯಲ್ಲಾದ ಗೊಂದಲ, ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು. ಈ ಮೂಲಕ ತಮ್ಮ ಸಮಸ್ಯೆ ಬಗೆಹರಿಸಿಕೊಂಡರೆ ಗೃಹಲಕ್ಷ್ಮಿ ಹಣ ಬರುತ್ತದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದೆ.