ಶಿವಮೊಗ್ಗ : 2024-25 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯ ತರಕಾರಿ ಬೀಜಗಳ(ಹೈಬ್ರಿಡ್ ಹಾಗೂ ಸುಧಾರಿತ ತಳಿ) ವಿತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳನ್ನು ನೀರಿನ ಸೌಲಭ್ಯವಿರುವ ಶಿವಮೊಗ್ಗ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತರಿಗೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್, ಬ್ಯಾಂಕ್ ಪಾಸ್ಬುಕ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರಿಗೆ ದಿ: 31-01-2025 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆAದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.