ಶಿವಮೊಗ್ಗ : ರೇಷ್ಮೆ ಇಲಾಖೆಯಿಂದ ಕೊಡಮಾಡುವ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ.
ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಆಸಕ್ತ ರೇಷ್ಮೆ ಬೆಳೆಗಾರರು ನಿಗದಿತ ನಮೂನೆ ಅರ್ಜಿಯನ್ನು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅ.31ರೊಳಗಾಗಿ ಸಲ್ಲಿಸುವಂತೆ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.