ಮಡಿಕೇರಿ : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ.
ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (ಆರ್ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಒಂದು ಭಾವಚಿತ್ರ, ರೂ.20 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.