alex Certify ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿ ಮಾಡಿಸಲು ಆ.16 ಕೊನೆಯ ದಿನಾಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿ ಮಾಡಿಸಲು ಆ.16 ಕೊನೆಯ ದಿನಾಂಕ

ಬೆಂಗಳೂರು ನಗರ ಜಿಲ್ಲೆ : 2023 ಮುಂಗಾರು ಹಂಗಾಮಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್ / ನಗರ ಸ್ಥಳಿಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ. ಜಿಲ್ಲೆಯ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ಅಧಿಸೂಚಿಸಲಾಗಿದೆ.

ರಾಗಿ, ಭತ್ತ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಿದ್ದು, ಅಂತಿಮ ದಿನವರೆಗೆ ಕಾಯದೆ ರೈತರು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ (Common Service Centre), ಕರ್ನಾಟಕ ಒನ್ ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಇನ್ಯೂರನ್ಸ್ ಕಂಪೆನಿ ಲಿ. (ಟೋಲ್ ಪ್ರೀ ನಂ: 1800-209-1111). ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ತಾಲ್ಲೂಕು ಪ್ರತಿನಿಧಿಗಳು : ಯಲಹಂಕ- ಜುನೈದ್ ಅಹಮದ್ (8892767860), ಬೆಂ. ಉತ್ತರ ಮತ್ತು ಬೆಂ. ಪೂರ್ವ- ನರಿಂದರ್ ಕುಮಾರ್ (ಮೊ. 7575850666) ಇವರನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...