ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಅನುಮೋದಿಸಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿದ್ದು, ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ಸೆಟ್, ಸೋಲಾರ್ ಪಂಪ್ಸೆಟ್, ಲಘುನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿದ್ದು, ಆಸಕ್ತ ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.