alex Certify ರೈತರೇ ಗಮನಿಸಿ : ‘ಕರ್ನಾಟಕ ಹಾಲು ಮಹಾಮಂಡಳಿ’ ಯಿಂದ ಮೆಕ್ಕೆಜೋಳ ಖರೀದಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ‘ಕರ್ನಾಟಕ ಹಾಲು ಮಹಾಮಂಡಳಿ’ ಯಿಂದ ಮೆಕ್ಕೆಜೋಳ ಖರೀದಿ ಆರಂಭ

ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್ಗೆ ರೂ.2250/- ರ ಬೆಲೆಯಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, ಫ್ರೂಟ್ಸ್ (FRUTTS) ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ.

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ ಸಾಗಾಣಿಕಾ ವೆಚ್ಚದ ಹೊರೆಯನ್ನು ತಗ್ಗಿಸಲು ಮಹಾಮಂಡಳವು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ. ರೈತರು ತಮ್ಮ ಮೆಕ್ಕೆಜೋಳದ ಮಾದರಿಗಳನ್ನು ದಾವಣಗೆರೆ ಡೈರಿ ಹಾಗೂ ಚಿತ್ರದುರ್ಗದ ಶೀತಲಿಕರಣ ಕೇಂದ್ರಗಳಲ್ಲಿ ನೀಡಬಹುದಾಗಿದೆ.

ಕಹಾಮ ಮೆಕ್ಕೆಜೋಳವನ್ನು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಪ್ರದೇಶದ ರೈತರುಗಳಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲೆಯ ವ್ಯವಸ್ಥಾಪಕರು ಡಾ. ಎಸ್.ಎಂ.ಮೂರ್ತಿ – 7760980540 ಹಾಗೂ ಚಿತ್ರದುರ್ಗ ಜಿಲ್ಲೆಯ ಉಪ ವ್ಯವಸ್ಥಾಪಕರು, (ಶೇಖರಣೆ) -8971435116 ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಕ.ಹಾ.ಮ ಪಶು ಆಹಾರ ಘಟಕದ ಪ್ರಕಟಣೆ ತಿಳಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...