ಬೆಂಗಳೂರು : ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ.
ಈ ಹಣ ಪಡೆಯೋದಕ್ಕೆ ರೈತರು ತಪ್ಪದೇ ಈ ಕೆಲಸ ಮಾಡಬೇಕು. ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಹಣ ಜಮಾ ಆಗೋದಿಲ್ಲ. ಹೌದು, ಪರಿಹಾರದ ಹಣ ಪಡೆಯಲು ತಪ್ಪದೇ ಆಧಾರ್ ಲಿಂಕ್ ಮಾಡಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂದಿದ್ದಾರೆ.