ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿಂದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಬಳ್ಳಾರಿ, ಕುರುಗೋಡು ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 04 ಪ್ರಸ್ತಾವನೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ 11 ಪ್ರಸ್ತಾವನೆಗಳು ಆಕ್ಷೇಪಣೆಗೊಂಡಿರುತ್ತವೆ.ರೈತರು ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 02 ರೊಳಗೆ ಸಲ್ಲಿಸಬಹುದಾಗಿದೆ. ನಿಗದಿತ ಸಮಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧು ಎಂದು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.