alex Certify ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಬಳ್ಳಾರಿಯಲ್ಲಿ ಅಪ್ರೆಂಟಿಸ್ ಶಿಪ್ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಬಳ್ಳಾರಿಯಲ್ಲಿ ಅಪ್ರೆಂಟಿಸ್ ಶಿಪ್ ಮೇಳ

ಬಳ್ಳಾರಿ : ಕುಡುತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಜಿಲ್ಲಾ ಮಟ್ಟದ ಅಪ್ರೆಂಟಿಸ್ಶಿಪ್ ಮೇಳವನ್ನು ನ.20ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಭಾರಿ ಪ್ರಾಚಾರ್ಯರಾದ ದೇವೆಂದ್ರ ಕುಮಾರ್.ಡಿ ಅವರು ತಿಳಿಸಿದ್ದಾರೆ.

ಈ ಮೇಳದಲ್ಲಿ ಉದ್ದಿಮೆದಾರರು ಮತ್ತು ಬೆಂಗಳೂರಿನ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರು ತಮ್ಮ ಸಿಬ್ಬಂದಿಗಳೊಂದಿಗೆ ಆಗಮಿಸಬೇಕು ಎಂದು ಅವರು ತಿಳಿಸಿದ್ದಾರೆ.

ಶಿಶಿಕ್ಷು ತರಬೇತಿ ನೊಂದಣಿಗಾಗಿ ಐಟಿಐ ಉತ್ತೀರ್ಣರಾದ ಮತ್ತು ಫಲಿತಾಂಶ ನಿರೀಕ್ಷೆಯಲ್ಲಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲಕ ದಾಖಲಾತಿಗಳೊಂದಿಗೆ ಹಾಜರಾಗಬಹುದು ಎಂದು ದೇವೆಂದ್ರಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...