alex Certify JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಸುಮಾರು 03 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಿದ್ಯಾರ್ಹತೆ : ಪಿಯುಸಿ, ಐಟಿಐ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...