ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 400 ಪದವೀಧರ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ portal.mhrdnats.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಗ್ರ್ಯಾಜುಯೇಟ್ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಎಐಸಿಟಿಇ ಅಥವಾ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಅಥವಾ ಟೆಕ್ನಾಲಜಿ (ಬಿಇ / ಬಿಟೆಕ್) ಪಡೆದಿರಬೇಕು. ಟೆಕ್ನಿಷಿಯನ್ (ಡಿಪ್ಲೊಮಾ) ನೇಮಕಾತಿಗೆ ಅರ್ಜಿ ಸಲ್ಲಿಸುವವರು ರಾಜ್ಯ ಅಥವಾ ಕೇಂದ್ರ ಸರ್ಕಾರಗಳಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು ಅಥವಾ ಸಂಸ್ಥೆಯಿಂದ ಮೂರು ವರ್ಷದ ಡಿಪ್ಲೊಮಾ ಪಡೆದಿರಬೇಕು. ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲಿ ಓದುವ ಮತ್ತು ಬರೆಯುವ ಜ್ಞಾನವನ್ನು ಹೊಂದಿರಬೇಕು. ಅರ್ಹತಾ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮಾತ್ರ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ (143), ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (116), ಕಂಪ್ಯೂಟರ್ ಸೈನ್ಸ್ (36), ಮಾಹಿತಿ ವಿಜ್ಞಾನ (20) ಮತ್ತು ಸಿವಿಲ್ (5) ಮತ್ತು ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ (5) ವಿಭಾಗಗಳಲ್ಲಿ ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಟೆಕ್ನಿಷಿಯನ್ (ಡಿಪ್ಲೊಮಾ) ನೇಮಕಾತಿಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ (55), ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (10) ಮತ್ತು ಕಂಪ್ಯೂಟರ್ ಸೈನ್ಸ್ (10) ವಿಭಾಗಗಳಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಗ್ರ್ಯಾಜುಯೇಟ್ ಅಪ್ರೆಂಟಿಸ್ ಗೆ 9,008 ರೂ., ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಗೆ 8,000 ರೂ. ಇದೆ.
ಶಾರ್ಟ್ ಲಿಸ್ಟ್ ಮಾಡಿದ ಅರ್ಜಿದಾರರ ಹೆಸರನ್ನು ಜನವರಿ 8, 2024 ರಂದು ಘೋಷಿಸಲಾಗುವುದು. ಅಭ್ಯರ್ಥಿಗಳ ದಾಖಲೆ ಪರಿಶೀಲನೆಯನ್ನು ಬೆಸ್ಕಾಂ, ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, 1ನೇ ಮಹಡಿ, ಕ್ರೆಸೆಂಟ್ ಟವರ್, ಕ್ರೆಸೆಂಟ್ ರಸ್ತೆ, ಮಲ್ಲಿಗೆ ನರ್ಸಿಂಗ್ ಹೋಂ ಬಳಿ, ರೇಸ್ ಕೋರ್ಸ್, ಬೆಂಗಳೂರು-560001 ವಿಳಾಸದಲ್ಲಿ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ಪ್ರಕ್ರಿಯೆಯನ್ನು ಜನವರಿ 22 ರಿಂದ 24, 2024 ರ ನಡುವೆ ಮಾಡಲಾಗುತ್ತದೆ.