alex Certify JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಗೃಹರಕ್ಷಕ ದಳ’ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಗೃಹರಕ್ಷಕ ದಳ’ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 5 ಇಂದು ಕೊನೆಯ ದಿನವಾಗಿದೆ.

ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ, ಬೆಂಗಳೂರು-560010 ಇಲ್ಲಿಗೆ ಕಳುಹಿಸಿಕೊಡಬೇಕು. ಅರ್ಜಿಗಳನ್ನು ಜನವರಿ 5ರವರೆಗೆ ಮಧ್ಯಾಹ್ನ 2.30ರಿಂದ 5ಗಂಟೆವರೆಗೆ ಉಚಿತವಾಗಿ ವಿತರಿಸಲಾಗುವುದು.

ಕಂಪ್ಯೂಟರ್ ಟೈಪಿಂಗ್ (ಕನ್ನಡ & ಇಂಗ್ಲೀಷ್) ಹಾಗೂ ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ & ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-560010 ಅಥವಾ ದೂರವಾಣಿ ಸಂಖ್ಯೆ 080-23142542ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...