ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆ.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02ರವರೆಗೆ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಹಳೇ ತಾಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ಉದ್ಯೋಗ ಮೇಳದಲ್ಲಿ 5ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿಯಿರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬಹುದು. ಈ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಿದ್ಯಾರ್ಹತೆ: ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ಹೊಂದಿರಬೇಕು.ಹೆಚ್ಚಿನ ಮಾಹಿತಿಗಾಗಿ ಮೊ.8073365184, 9019692898, 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’
ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪ್ಲೋಮಾ , ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಾಜನೂರು, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ. ಸಂ.: 8747824088 ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆನಂದಗಿರಿ, ತೀರ್ಥಹಳ್ಳಿ, ಭದ್ರಾವತಿ ದೂ.ಸಂ.: 9880005425 ಗಳನ್ನು ಸಂಪರ್ಕಿಸುವಂತೆ ತೀರ್ಥಹಳ್ಳಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.