ಬೆಂಗಳೂರು : ವಾಹನಗಳ ಫ್ಯಾನ್ಸಿ ನಂಬರ್ ಗಳ ಹರಾಜಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 31ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.
ಹೌದು. ವಾಹನಗಳಿಗೆ ಫ್ಯಾನ್ಸಿ ನಂಬರ್ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು ‘ಕೆಎ 04 ಎನ್ಡಿ’ ಸರಣಿಗೆ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 31ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.
‘ಕೆಎ 04 ಎನ್ಡಿ’ ಸರಣಿಯ ಹರಾಜು ಪ್ರಕ್ರಿಯೆ ಈ ಬಾರಿ ಹರಾಜು ಪ್ರಕ್ರಿಯೆಯು ಆ.31ರಂದು ಮಧ್ಯಾಹ್ನ 12 ಗಂಟೆಗೆ ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಆಸಕ್ತರು ಕಾರ್ಯದರ್ಶಿ, ರಾಜ್ಯ ಸಾರಿಗೆ ಪ್ರಾಧಿಕಾರ, ಬೆಂಗಳೂರು. ಈ ಹೆಸರಿನಲ್ಲಿ 75,000 ರೂ. ಡಿಮ್ಯಾಂಡ್ ಡ್ರಾಫ್ಟ್ನೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಜೊತೆ ಡಿಡಿ ಯನ್ನು ಆಗಸ್ಟ್ 31ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿದಾರರಿಗೆ ಟೋಕನ್ ನೀಡಲಾಗುವುದು. ಯಶಸ್ವಿ ಬಿಡ್ ದಾರರು ಎರಡು ಕೆಲಸದ ದಿನಗಳಲ್ಲಿ ಒಟ್ಟು ಬಿಡ್ ಮೊತ್ತವನ್ನು ಡಿಡಿ ರೂಪದಲ್ಲಿ ಪಾವತಿಸಬೇಕು.